ಭಾಸ್ಕರ ಪರ್ವಕ್ಕೆ ಭವ್ಯ ವೇದಿಕೆ.

ಭಾಸ್ಕರ ಪರ್ವಕ್ಕೆ ಭವ್ಯ ವೇದಿಕೆ.

ಮಾಧ್ಯಮ ಲೋಕದ ಧೀಮಂತ ಗುರು ಡಾ. ಭಾಸ್ಕರ ಹೆಗಡೆಗೆ ವಿಶಿಷ್ಟ ಸನ್ಮಾನ.

ಮಂಗಳೂರು: ಶಿಕ್ಷಣ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರೂವರೆ ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ಜನವರಿ 31ರಂದು ವೃತ್ತಿ ಬದುಕಿನಿಂದ ನಿವೃತ್ತರಾಗುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ಹಿರಿಯ-ಕಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದ ವತಿಯಿಂದ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜನವರಿ 31 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಉಜಿರೆ ಎಸ್​ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

‘ಭಾಸ್ಕರ ಪರ್ವ’ ಕಾರ್ಯಕ್ರಮದಲ್ಲಿ ಏನೇನು?

  • ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಎಸ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಭಾಸ್ಕರ ಹೆಗಡೆ ಕುರಿತಾದ ಅಭಿನಂದನಾ ಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ.
  • ಸಾಕ್ಷ್ಯಚಿತ್ರ ಪ್ರದರ್ಶನ: ಡಾ. ಭಾಸ್ಕರ ಹೆಗಡೆ ವೃತ್ತಿ ಜೀವನದ ಸಾಧನೆಗಳನ್ನು ಬಿಂಬಿಸುವ ವಿಶೇಷ ಸಾಕ್ಷ್ಯಚಿತ್ರವನ್ನು ಬೆಂಗಳೂರಿನ ‘ಕ್ಷೇಮವನ’ದ ಕಾರ್ಯನಿರ್ವಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ಬಿಡುಗಡೆಗೊಳಿಸಲಿದ್ದಾರೆ.
  • ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭಕ್ಕೆ ಪತ್ರಿಕೋದ್ಯಮ ಆಸಕ್ತರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

·         33 ವರ್ಷಗಳ ಸಾರ್ಥಕ ಪಯಣ

  • ಡಾ. ಭಾಸ್ಕರ ಹೆಗಡೆ ಪ್ರಾಧ್ಯಾಪಕರಾಗಿ ಮಾತ್ರವಲ್ಲದೆ, ನೂರಾರು ಜನ ಪತ್ರಕರ್ತರನ್ನು ರೂಪಿಸಿದ ಶಿಲ್ಪಿ ಎಂದೇ ಪ್ರಸಿದ್ಧರು. ಅವರ 33 ವರ್ಷಗಳ ಸುದೀರ್ಘ ಸೇವೆಯ ಗೌರವಾರ್ಥವಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *