40ಕ್ಕೂ ಹೆಚ್ಚು ಕಾಡಾನೆಗಳು ರೈತರ ಭೂಮಿಗೆ ನುಗ್ಗಿ ಹಾನಿ.
ಆನೇಕಲ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಿನಿಂದ ನಾಡಿಗೆ ದಾಗುಂಡಿ ಇಟ್ಟ ಕಾಡಾನೆಗಳ ದೊಡ್ಡ ಹಿಂಡು ರೈತರ ಬೆಳೆಗಳನ್ನು ನಾಶಪಡಿಸಿ ಆತಂಕ ಮೂಡಿಸಿದೆ. ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಪ್ರದೇಶದಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡು ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಶಾನಮಾವು, ಪಿರ್ಜೆಹಳ್ಳಿ ಹಾಗೂ ನಾಯಕನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿವೆ. ಈ ಹಾವಳಿಯಿಂದಾಗಿ ರೈತರು ಬೆಳೆದ ರಾಗಿ ಸೇರಿದಂತೆ ಇತರೆ ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.
ರಾತ್ರಿ ವೇಳೆಯಲ್ಲಿ ಕೃಷಿ ಭೂಮಿಗೆ ನುಗ್ಗುತ್ತಿರುವ ಕಾಡಾನೆಗಳ ಹಿಂಡು ಹೊಲಗಳಲ್ಲಿ ಬೆಳೆದ ಬೆಳೆಗಳನ್ನು ತುಳಿದು ನಾಶಪಡಿಸುತ್ತಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ. ಕಾಡಾನೆಗಳ ಭಯದಿಂದಾಗಿ ರೈತರು ಹೊಲಗಳಿಗೆ ಹೋಗಲು ಕೂಡ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
For More Updates Join our WhatsApp Group :



