ಕಾಡಾನೆ ಓಡಿಸಲು ಬಂದ AI ಕ್ಯಾಮರಾ.
ಮೈಸೂರು: ಇತ್ತೀಚೆಗೆ ಮೈಸೂರು ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಕ್ಯಾಮರಾಗಳನ್ನು ಧ್ವನಿವರ್ಧಕಗಳ ಜತೆ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಈ ಕ್ಯಾಮರಾಗಳು ಕಾಡಾನೆಗಳು ಸುಮಾರು 150 ಮೀಟರ್ ದೂರದಲ್ಲಿದ್ದಾಗಲೇ ಅವುಗಳನ್ನು ಗುರುತಿಸಿ, ಜೋರಾಗಿ ಶಬ್ದಗಳನ್ನು ಮಾಡುವ ಮೂಲಕ ಅವುಗಳನ್ನು ಓಡಿಸುತ್ತಿವೆ. ಇನ್ನು ಈ ಎಐ ಹೇಗೆ ಕಾರ್ಯನಿರ್ವಹಿಸುತ್ತೆ ಎನ್ನುವುದನ್ನ ಮೈಸೂರು ಅರಣ್ಯ ವಲಯದ ಡಿಸಿಎಫ್ ಪರಮೇಶ್ ಅವರು ವಿವರಿಸಿದ್ದಾರೆ.
For More Updates Join our WhatsApp Group :




