ನವದೆಹಲಿ : ದೆಹಲಿಯ ಶಕರ್‌ಪುರದಲ್ಲಿ ಆಘಾತಕಾರಿ ರೀತಿಯಲ್ಲಿ ಕಳ್ಳರು ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು, ಆಕೆಯನ್ನು ಕೊಂದು ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ರಹಸ್ಯವಾಗಿ ಹಿಂಬಾಲಿಸಿ ಆಕೆಯನ್ನು ಹಿಂದಿನಿಂದ ಹಿಡಿದು ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಚಿನ್ನದ ಕಿವಿಯೋಲೆಗಳನ್ನು ಕಸಿದುಕೊಳ್ಳುತ್ತಿರುವ ದೃಶ್ಯವನ್ನು ನೋಡಬಹುದು.
ಇದರಿಂದ ಆ ಮಹಿಳೆ ಮೂರ್ಛೆ ಹೋಗಿ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆ ದರೋಡೆಕೋರ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. ಈ ಘಟನೆ ನಡೆದ ಸ್ಥಳದಿಂದ ಕೆಲವೇ ಹೆಜ್ಜೆಗಳ ದೂರದಲ್ಲಿ ಶಹದಾರಾ ವಲಯ ಎಂಸಿಡಿ ಅಧ್ಯಕ್ಷರ ಮನೆ ಇದೆ. ಹೀಗಾಗಿ, ಅಲ್ಲಿನ ಜನರು ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.
For More Updates Join our WhatsApp Group :