ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನು ದುರಂತದಲ್ಲಿ ಅಂತ್ಯ.!

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನು ದುರಂತದಲ್ಲಿ ಅಂತ್ಯ.!

ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾ*.

ಆನೇಕಲ್​​ : ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಬನಶಂಕರಿ ನಿವಾಸಿಯಾಗಿರುವ ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಇನ್ನು ಟ್ರ್ಯಾಕ್ಟರ್​ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆ ನಡೆದು ಓರ್ವ ಮೃತಪಟ್ಟಿದ್ದರೂ ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ ಎನ್ನಲಾಗಿದೆ.

ಕಾರು ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗೇಟ್ ಬಳಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯ್, ದೊಡ್ಡಗೌಡ, ಅಂಬರೀಶ್​​ ಗಾಯಾಳುಗಳಾಗಿದ್ದು, ಇವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *