ಮೈಸೂರು ಅರಮನೆ ಮುಂದೆ ಭೀಕರ ಸ್ಫೋಟ.

ಮೈಸೂರು ಅರಮನೆ ಮುಂದೆ ಭೀಕರ ಸ್ಫೋಟ.

ಕ್ರಿಸ್ಮಸ್ ದಿನ ಹೀಲಿಯಂ ಸಿಲಿಂಡರ್ ಸ್ಫೋಟ; ಸಾವಿನ ಸಂಖ್ಯೆ 3.

ಮೈಸೂರು : ಕ್ರಿಸ್ಮಸ್ ದಿನ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಸ್ಥಳದ ಸಮೀಪವೇ ಅಳವಡಿಸಲಾಗಿದ್ದ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾದಲ್ಲಿ ಘಟನೆಯ ಯಾವುದೇ ದೃಶ್ಯ ಸೆರೆಯಾಗದಿರುವುದು ಅಚ್ಚರಿ ಮೂಡಿಸಿದೆ.

360 ಡಿಗ್ರಿ ಕ್ಯಾಮರಾ ಅದಾಗಿದ್ದು, ಘಟನೆ ಸಮಯದಲ್ಲಿ ಬೇರೆ ಭಾಗವನ್ನು ಸೆರೆ ಹಿಡಿಯುತ್ತಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಅರಮನೆಯ ಭದ್ರತೆಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕ್ಯಾಮರಾಗಳನ್ನು ಅಳವಡಿಸಿದ್ದರೂ, ನಿರ್ಣಾಯಕ ಸಮಯದಲ್ಲಿ ದೃಶ್ಯಗಳು ಲಭ್ಯವಾಗದಿರುವುದು ಭದ್ರತಾ ಲೋಪದ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ರಾಜ್ಯ ಗೃಹ ಇಲಾಖೆ ಹಾಗೂ ಮೈಸೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಎನ್ಐಎ ಸಹ ಮಾಹಿತಿ ಕಲೆ ಹಾಕುತ್ತಿದೆ. ಈ ಘಟನೆಯು ಅರಮನೆಯ ಭದ್ರತಾ ವ್ಯವಸ್ಥೆಯ ಬಗ್ಗೆ ಕಳವಳ ಹುಟ್ಟುಹಾಕಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *