50 ಯುವತಿಯರು ಕಟ್ಟಡದಿಂದ ಜಿಗಿದು ಜೀವ ಉಳಿಸಿಕೊಂಡ ಘಟನೆ.
ಬೆಂಗಳೂರು : ನಗರದ ನಂದಿನಿ ಲೇಔಟ್ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡವೊಂದು ಇಡೀ ಪ್ರದೇಶವನ್ನು ಆತಂಕಕ್ಕೆ ತಳ್ಳಿದೆ. ಇಲ್ಲಿನ ಪೇಯಿಂಗ್ ಗೆಸ್ಟ್ (PG) ವಸತಿ ನಿಲಯವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸುಮಾರು 50 ಯುವತಿಯರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಕ್ಕೆ ಜಿಗಿದಿರುವ ಘಟನೆ ನಡೆದಿದೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಯುವತಿಯರು ಪ್ರಾಣಭಯದಿಂದ ಕಟ್ಟಡದಿಂದ ಕೆಳಕ್ಕೆ ಜಿಗಿಯುತ್ತಿರುವ ಭೀಕರ ದೃಶ್ಯಗಳು ಸೆರೆಯಾಗಿವೆ. ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳ ಸಮಯಪ್ರಜ್ಞೆಯಿಂದ ಯುವತಿಯರನ್ನು ರಕ್ಷಿಸಲಾಗಿದ್ದು, ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
For More Updates Join our WhatsApp Group :




