ವಿಕಲಚೇತನರು ಮತದಾನ ಮಾಡಲು ಒಂದು ಹೊಸ ವ್ಯವಸ್ಥೆ..!

ತುಮಕೂರು: ವಿಧಾನಸಭೆ ಚುನಾವಣೆಗೆ ಮತದಾನ ಮಾಡಲು ಅಂಗವಿಕಲರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿಗೆ ಒಂದರಂತೆ ವಾಹನ ಸೌಲಭ್ಯ ಕಲ್ಪಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ‘ಸ್ವೀಪ್’ ಸಮಿತಿ ವತಿಯಿಂದ ಸೋಮವಾರ ಅಂಗವಿಕಲರು, ತೃತೀಯ ಲಿಂಗಿ ಮತದಾರರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ 29,700 ಅಂಗವಿಕಲ ಮತದಾರರಿದ್ದು, ಮೇ 10ರಂದು ಮತದಾನ ಮಾಡಲು ಅನುಕೂಲವಾಗುವಂತೆ ಪ್ರತಿ ಗ್ರಾಮ ಪಂಚಾಯಿತಿಯ 6ರಿಂದ 8 ಕಿ.ಮೀ ವ್ಯಾಪ್ತಿಗೆ ಒಂದರಂತೆ ಆಟೊ ವಾಹನ ಸೌಲಭ್ಯ ಕಲ್ಪಿಸಲಾಗುವುದು. ಈ ವಾಹನ ಸೌಲಭ್ಯ ಬಳಸಿಕೊಂಡು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಹೇಳಿದರು.

ಕಲೆ, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ತಮ್ಮ ಸಂಗೀತ ಗಾಯನದ ಮೂಲಕ ಮತದಾರರಲ್ಲಿ ಅರಿವು ಮೂಡಿಸಬೇಕು. ತೃತೀಯ ಲಿಂಗಿ ಮತದಾರರು ತಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ, ತೃತೀಯ ಲಿಂಗಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ‘ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ 82ರಷ್ಟು, ನಗರ ಪ್ರದೇಶದಲ್ಲಿ ಶೇ 65ರಷ್ಟು ಮತದಾನವಾಗಿದೆ. ಈ ಬಾರಿ ಶೇ 100ರಷ್ಟು ಮತದಾನ ಆಗಬೇಕಿದೆ’ ಎಂದು ಹೇಳಿದರು.

ಯುವ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸದೆ ಮತದಾನದಿಂದ ಹೊರಗೆ ಉಳಿಯುತ್ತಿದ್ದಾರೆ. ಮತ ಚಲಾಯಿಸಲು ಮತದಾನದ ಪ್ರಾಮುಖ್ಯತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಚುನಾವಣಾ ರಾಯಭಾರಿಗಳಾದ ಹರಿಕಥಾ ವಿದ್ವಾನ್ ಲಕ್ಷ್ಮಣ್ ದಾಸ್, ಗಾಯಕ ಕಂಬದ ರಂಗಯ್ಯ, ಮೋಹನ್ ಕುಮಾರ್, ಲಿಲ್ಲಿ, ಮಂಜಮ್ಮ ರತ್ನಮ್ಮ ಮಾತನಾಡಿದರು.

Pragati TV Social Connect for more latest u

Leave a Reply

Your email address will not be published. Required fields are marked *