‘Max’ ಸಿನಿಮಾ ವಿವಾದಕ್ಕೆ ಹೊಸ ತಿರುವು.

 ‘Max’ ಸಿನಿಮಾ ವಿವಾದಕ್ಕೆ ಹೊಸ ತಿರುವು.

KRG ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್.

ಕಿಚ್ಚ ಸುದೀಪ್  ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್​​ಜಿ ಮನವಿ ಮೇರೆಗೆ ಸಿನಿಮಾದ ನಿರ್ಮಾಪಕರಿಗೆ ಮದ್ರಾಸ್ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ಅವರು ಕೆಆರ್‌ಜಿ ಸ್ಟುಡಿಯೋಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು. ಒಪ್ಪಂದದ ಪ್ರಕಾರ ಹಣವನ್ನು ಚೆನ್ನೈನಲ್ಲಿರುವ ಕಲೈಪುಲಿ ಎಸ್ ತನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಿರುವುದರಿಂದ, ವಿವಾದದ ಒಂದು ಭಾಗ ಚೆನ್ನೈನಲ್ಲಿ ನಡೆದಂತಾಗುತ್ತದೆ. ಹೀಗಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಕೇಸ್ ನಡೆಸಲು ಅವಕಾಶ ನೀಡಿದರು. ಆದರೆ ಇದನ್ನು ವಿರೋಧಿಸಿ ಕೆಆರ್​​ಜಿ ಈಗ ಅರ್ಜಿ ಹಾಕಿದ್ದು, ಇದಕ್ಕೆ ಸಂಬಂಧಿಸಿದಂತೆ ಕಲೈಪುಲಿ ಅವರಿಗೆ ನೊಟೀಸ್ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ನಿಗದಿಪಡಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *