ಅರಾರಿಯಾ: ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಹೊಸದಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗವು ಮಂಗಳವಾರ ಕುಸಿದಿದೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಕ್ರಾ ನದಿಯನ್ನು ವ್ಯಾಪಿಸಿರುವ ಸೇತುವೆ ಕುಸಿಯುವ ಮೊದಲು ಒಂದು ಬದಿಗೆ ವಾಲಿತ್ತು ಎಂದು ವರದಿಯಾಗಿದೆ. ನದಿ ದಡದಲ್ಲಿ ಜಮಾಯಿಸಿದ್ದ ಜನರ ಗುಂಪು ಸೇತುವೆ ಕುಸಿತ ದೃಶ್ಯವನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದಿದೆ.
ಪಿಟಿಐ ಜೊತೆ ಮಾತನಾಡಿದ ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್ ರಂಜನ್, ಬಾಕ್ರಾ ನದಿಗೆ ಹೊಸದಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗವು ಕುಸಿದಿದೆ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದರು