ಮದುವೆ ಭರವಸೆ ನೀಡಿ ಮಾತು ಉಲ್ಲಂಘಿಸಿದರೆ ಅತ್ಯಾಚಾರ ಅಡಿಯಲ್ಲಿ ಅಪರಾಧವಾಗದು

ಅಕ್ರಮ ಮದ್ಯ ಮಾರಾಟ ನಿಷೇಧ ಕುರಿತು ಹೈಕೋರ್ಟ್ ಆದೇಶ ಪಾಲಿಸದ ಸರ್ಕಾರ: ಹೈಕೋರ್ಟ್ಗೆ ಅರ್ಜಿ

ಬೆಂಗಳೂರು: ವಿವಾಹವಾಗುವುದಾಗಿ ಭರವಸೆ ನೀಡಿ ಉಲ್ಲಂಘಿಸಿದ ಪ್ರಕರಣವನ್ನು ಅತ್ಯಾಚಾರ ಆರೋಪದಲ್ಲಿ ವಿಚಾರಣೆಗೆ ಒಳಪಡಿಸುವುದು ಅವಿವೇಕತನವಾಗಲಿದೆ. ವಿವಾಹವಾಗುವುದಾಗಿ ಸುಳ್ಳು ಭರವಸೆ ನೀಡುವುದು ಅತ್ಯಾಚಾರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಅಮೆರಿಕದಲ್ಲಿ ನೆಲೆಸಿರುವ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಸಂತೋಷ್ ಶೆಟ್ಟಿ ವಿರುದ್ಧ ಅತ್ಯಾಚಾರ ಮತ್ತವರ ಕುಟುಂಬದವರ ವಿರುದ್ಧ ವಂಚನೆ ಆರೋಪದಲ್ಲಿ ಕುಂದಾಪುರ ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಸಂತೋಷ್ ಶೆಟ್ಟಿ ವಿದೇಶಕ್ಕೆ ತೆರಳಿದ ಬಳಿಕ ದುರುದಾರ ಮಹಿಳೆಯೊಂದಿಗೆ ಹಲವು ದಿನಗಳ ಕಾಲ ವಾಟ್ಸ್​ಆ್ಯಪ್​ ಸಂಭಾಷಣೆ ನಡೆಸಿದ್ದಾರೆ. ಆದರೆ, ಎಲ್ಲಿಯೂ ಲೈಂಗಿಕ ಕ್ರಿಯೆಗೆ ಸಂಬಂಧಿಸಿದಂತೆ ಚರ್ಚಿಸಿಲ್ಲ. ದೂರುದಾರರು ಮತ್ತು ಅರ್ಜಿದಾರರ ನಡುವೆ ಹಲವು ವ್ಯತ್ಯಾಸಗಳು ಕಂಡುಬಂದಿದ್ದು, ಇದೇ ಕಾರಣದಿಂದ ನಿಶ್ಚಿತಾರ್ಥವೂ ಮುರಿದು ಬಿದ್ದಿರುತ್ತದೆ. ಪ್ರಕರಣದಲ್ಲಿ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿಲ್ಲ. ಮದುವೆಯಾಗುವುದಾಗಿ ತಿಳಿಸಿದ್ದು, ಮುಂದಿನ ಪ್ರಕ್ರಿಯೆಗಳನ್ನು ಮುಂದುವರೆಸಲಾಗಿದೆ. ಕಾರಣಾಂತರಗಳಿಂದ ಭರವಸೆ ಈಡೇರಿಸಲು ಸಾಧ್ಯವಾಗಿಲ್ಲ. ವಿವಾಹ ಕಾರಣಾಂತರದಿಂದ ಮುರಿದು ಬಿದ್ದಿದೆ.

ಆದರೆ, ಅರ್ಜಿದಾರರ ಕುಟುಂಬ ದೂರುದಾರರಿಗೆ ಯಾವುದೇ ರೀತಿಯಲ್ಲಿಯೂ ಆಮಿಷ ನೀಡಿಲ್ಲ. ಮದುವೆಗೂ ಮುನ್ನ ಆಗಿರುವ ನಿಶ್ಚಿತಾರ್ಥವೂ ಮುರಿದು ಬಿದ್ದ ಪರಿಣಾಮ ವಿವಾಹ ರದ್ದಾಗಿದೆ. ಆದ್ದರಿಂದ ಈ ಪ್ರಕರಣ ವಂಚನೆ ಆರೋಪದಲ್ಲಿಯೂ ಬರುವುದಿಲ್ಲ. ಹೀಗಾಗಿ ಈ ಪ್ರಕರಣ ಮುಂದುವರೆಕೆಗೆ ಅವಕಾಶ ನೀಡಿದ್ದಲ್ಲಿ ಕಾನೂನಿನ ದುರುಪಯೋಗವಾಗಲಿದೆ ಎಂದು ತಿಳಿಸಿರುವ ನ್ಯಾಯಪೀಠ ಅರ್ಜಿಯನ್ನು ಪುರಸ್ಕರಿಸಿದ್ದು, ಪ್ರಕರಣ ರದ್ದುಪಡಿಸಿ ಆದೇಶಿಸಿದೆ

Leave a Reply

Your email address will not be published. Required fields are marked *