ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ? : ತಡರಾತ್ರಿ ಪೊಲೀಸರ ದಾಳಿ

ಮೈಸೂರು: ಕೆ.ಆರ್.ಎಸ್ ಹಿನ್ನೀರಿನ ಪ್ರದೇಶದ ಬಳಿ ಇರುವ ಖಾಸಗಿ ಜಮೀನಿನಲ್ಲಿ ಆಯೋಜಿಸಿದ್ದ ಪಾರ್ಟಿ ಮೇಲೆ ಪೊಲೀಸರು ತಡರಾತ್ರಿ ದಾಳಿ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಯುವಕ, ಯುವತಿಯರು ಸೇರಿ 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ಹೊರವಲಯದಲ್ಲಿನ ಹಿನ್ನೀರು ಪ್ರದೇಶದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಅಬ್ಬರದ ಡಿಜೆ ಸಂಗೀತ ಏರ್ಪಡಿಸಲಾಗಿತ್ತು. ಇಲ್ಲಿ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನೇತೃತ್ವದಲ್ಲಿ ಹೆಚ್ಚುವರಿ ಎಸ್​​ಪಿ ನಾಗೇಶ್, ಡಿವೈಎಸ್ಪಿ ಕರೀಂ ರಾವತರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದ ಯುವಕ-ಯುವತಿಯರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಪಾರ್ಟಿಗಾಗಿ ಬಳಸಲಾದ ಸಂಗೀತ ಉಪಕರಣಗಳು ಹಾಗೂ 30ಕ್ಕೂ ಹೆಚ್ಚು ಕಾರುಗಳನ್ನೂ ಸಹ ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *