ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ.

ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ.

ನರ್ಸ್‌ಗಳ ಖಾಸಗಿ ವಿಡಿಯೋ: ಕಾಮುಕ ಸಿಬ್ಬಂದಿ ಅಂದರ್.

ಬೆಂಗಳೂರು: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್​ಗಳ ಖಾಸಗಿ ವೀಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ಈ ಕೃತ್ಯವು ವೈದ್ಯರ ಗಮನಕ್ಕೆ ಬಂದ ನಂತರ ಪೊಲೀಸರಲ್ಲಿ ದೂರು ನೀಡಲಾಗಿದ್ದು, ಕಾಮುಕನನ್ನು ಬಂಧಿಸಲಾಗಿದೆ.

ನರ್ಸ್​ಗಳು ಬಟ್ಟೆ ಬದಲಿಸುವ ವೀಡಿಯೋ ಮಾಡುತ್ತಿದ್ದ!

ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ತನ್ನ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ ತೆಗೆದು ಸಿಕ್ಕಿಹಾಕಿಕೊಂಡಿದ್ದಾನೆ. ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಈತ ಲೇಡಿ ನರ್ಸ್‌ಗಳು ಬಟ್ಟೆ ಬದಲಿಸುವ ಸಂದರ್ಭದಲ್ಲಿ ಫೋಟೋ ಮತ್ತು ವೀಡಿಯೋ ಚಿತ್ರಿಸಿ ವಿಕೃತಿ ಮೆರೆದಿದ್ದ. ಕಾಮುಕನ ಈ ಕೃತ್ಯವನ್ನು ಗಮನಿಸಿದ್ದ ನರ್ಸ್​ವೊಬ್ಬರು ತಕ್ಷಣವೇ ಈ ವಿಷಯವನ್ನು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಕೂಡಲೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಚೇತನ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಮುಕನನ್ನು ಬಂಧಿಸಿದ ಪೊಲೀಸರು

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆರೋಪಿ ಸುವೆಂದು ಮೊಹಂತ ಕಳೆದ ಒಂದು ವರ್ಷದಿಂದ ಅದೇ ಖಾಸಗಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಅದಲ್ಲದೇ ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ ಮತ್ತು ವೀಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿ ಸುವೆಂದು ಮೊಹಂತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *