ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆಯೇ?
ಮಹಾರಾಷ್ಟ್ರ: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ ವಿಲೀನ ಮತ್ತು ಹೊಸ ನಾಯಕತ್ವದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎರಡು ಬಣಗಳ ವಿಲೀನ ಪ್ರಕ್ರಿಯೆಯು ಅಜಿತ್ ಪವಾರ್ ಬದುಕಿದ್ದಾಗಲೇ ಅಂತಿಮ ಹಂತಕ್ಕೆ ತಲುಪಿತ್ತು. ಫೆಬ್ರವರಿ 8 ಅಥವಾ ಫೆಬ್ರವರಿ ಮಧ್ಯಭಾಗದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿ 7 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಬಹುದು ಎನ್ನಲಾಗಿದೆ. ಎನ್‌ಸಿಪಿ ಪಕ್ಷವನ್ನು ಮುನ್ನಡೆಸಲು ಅಥವಾ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳಲು ನಾಲ್ಕು ಹೆಸರುಗಳು ಮುಂಚೂಣಿಯಲ್ಲಿವೆ.
ಶರದ್ ಪವಾರ್ ಅವರು ಪಕ್ಷದ ಸ್ಥಾಪಕ ಮತ್ತು ಸರ್ವಸಮ್ಮತ ನಾಯಕ. ವಿಲೀನದ ನಂತರ ಇಡೀ ಪಕ್ಷವನ್ನು ಮತ್ತೆ ತಮ್ಮ ಮಾರ್ಗದರ್ಶನದಲ್ಲಿ ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ. ಇನ್ನು ಸುನೇತ್ರಾ ಪವಾರ್ ಅಜಿತ್ ಪವಾರ್ ಅವರ ಪತ್ನಿ ಮತ್ತು ರಾಜ್ಯಸಭಾ ಸಂಸದೆ. ಅಜಿತ್ ಪವಾರ್ ಅವರ ರಾಜಕೀಯ ಪರಂಪರೆಯನ್ನು ಮುಂದುವರಿಸಲು ಮತ್ತು ಪಕ್ಷದ ಶಾಸಕಾಂಗ ಪಕ್ಷದ ನಾಯಕಿಯಾಗಿ ಇವರನ್ನು ನೇಮಿಸುವ ಬಗ್ಗೆ ಪಕ್ಷದೊಳಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಸುಪ್ರಿಯಾ ಸುಳೆ ಕೂಡ ಈ ಮುಂಚೂಣಿಯಲ್ಲಿ ಇದ್ದರೆ, ಶರದ್ ಪವಾರ್ ಅವರ ಪುತ್ರಿ. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಮುಖವಾಗಿ ಗುರುತಿಸಿಕೊಂಡಿರುವ ಇವರು ವಿಲೀನದ ನಂತರ ಪ್ರಮುಖ ಸಾಂಸ್ಥಿಕ ಜವಾಬ್ದಾರಿ ವಹಿಸಿಕೊಳ್ಳಬಹುದು ಎಂದು ಹೇಳಲಾಗಿದೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH
.




