ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ಅಲ್ಲಿನ ಅಧ್ಯಕ್ಷ ಡುಮಾ ಗಿಡಿಯಾನ್ ಬೊಕೊ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗ ಸ್ವಾಗತಿಸಿದರು. ದ್ರೌಪದಿ ಮುರ್ಮು ಅವರಿಗೆ ವಿಶೇಷ ಗಿಫ್ಟ್ ಆಗಿ 8 ಚೀತಾಗಳನ್ನು ನೀಡಲಾಗಿದೆ. ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾದಿಂದ ಎಂಟು ಚೀತಾಗಳನ್ನು ಭಾರತಕ್ಕೆ ನೀಡಲಾಗುವುದು ಎಂದು ಹೇಳಲಾಗಿದೆ.
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತಂದ ಅದನ್ನು ಬಿಡಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ನಮೀಬಿಯಾದಿಂದ ಚೀತಾಗಳನ್ನು ತಂದು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿದೆ. ಇದಕ್ಕೆ ಮತ್ತೆ 8 ಚೀತಾಗಳು ಸೇರಲಿವೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ನಡೆದ ಚೀತಾ ಯೋಜನೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.
For More Updates Join our WhatsApp Group :
