ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹ*.

ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹ*.

ಬೆಂಗಳೂರು: ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ನಡೆದಿದೆ. ಯಾಮಿನಿ‌ ಪ್ರಿಯಾ ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌ ಪ್ರಿಯಾ ಲವ್ ಮಾಡಲು ಒಪ್ಪದಿರುವುದಕ್ಕೆ ಕೊಲೆ ಮಾಡಿರುವ ಸಾಧ್ಯತೆಗಳಿದ್ದು, ವಿಘ್ನೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.

ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ, ಎಕ್ಸಾಮ್ ಇದೆ ಎಂದು ಇಂದು (ಅಕ್ಟೋಬರ್ 16) ಬೆಳಗ್ಗೆ ಏಳು ಗಂಟೆಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಕಾಲೇಜ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿ, ಪ್ರಿಯಾಳ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶ್ರೀರಾಮ ಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು,  ಲವ್ ವಿಚಾರಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತನಿಖೆ ನಡೆಸಿದ್ದಾರೆ.

ಪ್ರೀತಿ ನಿರಾಕರಿಸಿದ್ದ 20 ವರ್ಷದ ಯಾಮಿನಿ ಪ್ರಿಯಾ, ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಆಕೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ಬಳಿಕ ಪ್ರಿಯಾ ಕುತ್ತಿಗೆ, ಮುಖಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಪರಿಯಾಗಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಿಯಾ ಸ್ಥಳದಲ್ಲೇ ಜೀವ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *