ಡಿಕೆಶಿ ತಿನಿಸಿದ ಲಡ್ಡು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ
ವಿಜಯಪುರ : ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು. ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್ ಸಿಎಂಗೆ ಸಿಹಿ ತಿನ್ನಿಸಿದರು. ಆದರೆ, ಆ ಲಡ್ಡನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಯಿಂದ ತೆಗೆದು ಎಸೆದಿದ್ದಾರೆ.
For More Updates Join our WhatsApp Group :




