ಸರ್ಕಾರಿ – ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ.
ಚಾಮರಾಜನಗರ : ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್ಆರ್ಟಿಸಿ ಬಸ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
For More Updates Join our WhatsApp Group :




