ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ಎಚ್.ಬೇಗೂರು ಬಳಿ ಈ ದುರ್ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನಿಂದ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದ ಕುಟುಂಬ ಪ್ರಯಾಣಿಸುತ್ತಿದ್ದ ಕಾರಿಗೆ, ಮುಂದೆ ಸಾಗುತ್ತಿದ್ದ ಲಾರಿಯೊಂದು ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ.ಈ ಘಟನೆಯಲ್ಲಿ, ಕಾರಿನಲ್ಲಿದ್ದ ಐವರ ಪೈಕಿ 60 ವರ್ಷದ ಶಿವಲಿಂಗ ಗೌಡ ಮತ್ತು 55 ವರ್ಷದ ಪ್ರಮೀಳಾ ಎಂಬುವರು ದುರಂತವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
For More Updates Join our WhatsApp Group :
