ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!

ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!

ಕಲಬುರಗಿ ದೇವಸ್ಥಾನದಲ್ಲಿ ಕಳ್ಳತನ: ಚಿನ್ನಾಭರಣ ಕದ್ದ ಕಳ್ಳ .

ಕಲಬುರಗಿ : ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ.

 ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *