ರೈಲ್ವೆ ಹಳಿಯಲ್ಲಿ ನಿಂತಿದ್ದ ಟ್ರಕ್‌ಗೆ ರೈಲು ಡಿಕ್ಕಿ.

ರೈಲ್ವೆ ಹಳಿಯಲ್ಲಿ ನಿಂತಿದ್ದ ಟ್ರಕ್‌ಗೆ ರೈಲು ಡಿಕ್ಕಿ.

ಜಾರ್ಖಂಡ್‌ನಲ್ಲಿ ಭಯಾನಕ ಅಪ*ತ.

ಜಾರ್ಖಂಡ್ : ರೈಲ್ವೆ ಕ್ರಾಸಿಂಗ್​ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ನವದಿಹ್ ರೈಲ್ವೆ ಕ್ರಾಸಿಂಗ್‌ನಲ್ಲಿ ಈ ಘಟನೆ ನಡೆದಿದೆ. ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ಟ್ರಕ್ ಈ ಕಡೆಯಿಂದ ಹಳಿ ದಾಟಿದಾಗ ಗೇಟ್ ತೆರೆದಿತ್ತು ಅತ್ತ ಹೋಗುವಷ್ಟರಲ್ಲಿ ಮುಚ್ಚಿತ್ತು ಹೀಗಾಗಿ ಅರ್ಧದಾರಿಯಲ್ಲಿ ನಿಂತ ಟ್ರಕ್​ಗೆ ರೈಲು ಡಿಕ್ಕಿ ಹೊಡೆದಿತ್ತು.

ರೈಲು ಡಿಕ್ಕಿ ಹೊಡೆದು ತಳ್ಳಿದ ಪರಿಣಾಮ ಟ್ರಕ್​ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಜಸಿದಿಹ್-ಅಸನ್ಸೋಲ್ ಮುಖ್ಯ ಮಾರ್ಗದಲ್ಲಿ ರೈಲು ಸಂಚಾರ ಸುಮಾರು ಎರಡು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *