ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು.
ತುಮಕೂರು : ನಡೆದಾಡುವ ದೇವರು ಎಂದು ಪ್ರಸಿದ್ಧರಾದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ.
ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಮಠದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಕಾರ್ಯಕ್ರಮವನ್ನು ಒಂದೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರು ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
For More Updates Join our WhatsApp Group :



