ಹಾಸನ: ವೈಯಕ್ತಿಕ ದ್ವೇಷ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್(22) ಕೊಲೆಯಾದ ಯುವಕ.
ಕೊಲೆಗೈದು ಅಜ್ಜೇನಹಳ್ಳಿಯ ನಿವಾಸಿ ಶ್ರೀನಿವಾಸ್ ಎಸ್ಕೇಪ್ ಆಗಿದ್ದಾನೆ. ಬೇಲೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಸ್ಥಳೀಯರೊಬ್ಬರು ಟಿವಿ9 ಜೊತೆಗೆ ಮಾತನಾಡಿದ್ದು, ಕೊಲೆಯಾದ ಯುವಕ ಬೇಕರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೊಲೆ ಮಾಡುವಂತಹ ದ್ವೇಷ ಏನಿತ್ತು ಗೊತ್ತಿಲ್ಲ ಎಂದು ಹೇಳಿದ್ದಾರೆ.
For More Updates Join our WhatsApp Group :
