ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್.

ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್.

ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ  ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ ಯುವಕ

ಬೆಂಗಳೂರು: ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ  ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ ಯುವಕರ ಗುಂಪೊಂದು ಅತಿರೇಖಾದ ವರ್ತನೆ ತೋರಿದ್ದಾರೆ. ಸ್ಕೂಟರ್‌ನಲ್ಲಿ ಮೂವರು ಯುವಕರು ಹೆಲ್ಮೆಟ್ ಇಲ್ಲದೆ ‘ಟ್ರಿಪಲ್ ರೈಡಿಂಗ್’ ಮಾಡುತ್ತಿರುವುದಲ್ಲದೆ, ಚಲಿಸುವ ವಾಹನದಲ್ಲೇ ಬಿಯರ್ ಕುಡಿಯುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಮೂವರು ಯುವಕರು ಯಾವುದೇ ಭಯವಿಲ್ಲದೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದು, ಹಿಂಬದಿ ಕುಳಿತಿದ್ದ ಯುವಕ ಬಿಯರ್ ಬಾಟಲಿ ಹಿಡಿದು ಮದ್ಯಪಾನ ಮಾಡುತ್ತಾ ವಿಕೃತವಾಗಿ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ. ಈ ಯುವಕರು ಟ್ರಿಪಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ ಮತ್ತು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನದಂತಹ ಗಂಭೀರ ಅಪರಾಧಗಳನ್ನು ಎಸಗಿದ್ದಾರೆ. ಇವರ ಈ ಬೇಜವಾಬ್ದಾರಿ ವರ್ತನೆ ಸ್ವತಃ ಅವರಿಗಷ್ಟೇ ಅಲ್ಲದೆ, ರಸ್ತೆಯಲ್ಲಿ ಹೋಗುವ ಇತರ ಸಾರ್ವಜನಿಕರಿಗೂ ಪ್ರಾಣಾಪಾಯ ತಂದೊಡ್ಡುವಂತಿತ್ತು.

 ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾಗಿದ್ದು,. ವಿಡಿಯೋವನ್ನು ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದ್ದು, ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ವಿಡಿಯೋ ಗಮನಿಸಿರುವ ಬೆಂಗಳೂರು ಸಂಚಾರಿ ಪೊಲೀಸರು (BTP), ವಾಹನ ಸಂಖ್ಯೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *