ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಬೆಂಗಳೂರು: ಜಾತಿನಿಂದನೆ ಮತ್ತು ಬಿಬಿಎಂಪಿಯ  ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಕಾರ್ಯಕರ್ತರು ಸ್ವಾತಂತ್ರ‍್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಮಹಿಳಾ, ದಲಿತ ವಿರೋಧಿ ಶಾಸಕನನ್ನು ಕಿತ್ತೊಗೆಯಿರಿ, ಮುನಿರತ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು. ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ? ದಲಿತ ಸಮುದಾಯದವರ ಬಳಿ ಬಿಜೆಪಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬಬೇಕು ಎಂದು ಒತ್ತಾಯಿಸಿದರು.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬAಧಿಸಿದAತೆ ಮುನಿರತ್ನ ಹಾಗೂ ಅವರ ಆಪ್ತ ವಸಂತ ಕುಮಾರ್ ಅವರು ₹೩೦ ಲಕ್ಷಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರು ದೂರು ನೀಡಿದ್ದಾರೆ. ಜಾತಿ ನಿಂದನೆಗೆ ಸಂಬAಧಿಸಿದAತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಆಡಿಯೊದಲ್ಲಿನ ಮುನಿರತ್ನ ಅವರ ಮಾತುಗಳು ಕೇವಲ ಅವರೊಬ್ಬರ ವೈಯಕ್ತಿಕ ಹೇಳಿಕೆಯಲ್ಲ, ಸಮಸ್ತ ಬಿಜೆಪಿಗರ ಮನಸ್ಥಿತಿಯ ಪ್ರತಿರೂಪ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿಯು ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಮುನಿರತ್ನ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಪಕ್ಷದ ಎಸ್ಸಿಎಸ್ಟಿ ವಿಭಾಗದ ಅಧ್ಯಕ್ಷ ಸಿದ್ದು, ಮುಖಂಡರಾದ ಜಗದೀಶ ಬಾಬು, ಲೋಕೇಶ್, ಶಶಿಧರ್ ಆರಾಧ್ಯ, ಅನಿಲ್ ನಾಚಪ್ಪ, ಅನಿತಾ, ಶರಣ್ಯ, ಕಲೈ, ಮುನೀಂದ್ರ, ಶರವಣ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *