ಕಳೆದ ವರ್ಷ ಅರಮನೆ ಮೈದಾನದಲ್ಲಿ ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಮದುವೆ ಅದ್ಧೂರಿಯಾಗಿ ನೆರವೇರಿತ್ತು. ಕೆಲವೇ ದಿನಗಳ ಹಿಂದೆ ಅವಿವಾ ಅಭಿಷೇಕ್ ಗರ್ಭಿಣಿ ಆಗಿರುವ ಸುದ್ದಿ ಬಂದಿತ್ತು. ಇದೀಗ ಅಭಿ- ಅವಿವಾ ದಂಪತಿ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ್ದಾರೆ. ಅವಿವಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅಂಬಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಇಂದು ಗಂಡು ಮಗು ಜನನವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮಗುವಿಗೆ ಅವಿವಾ ಜನ್ಮ ನೀಡಿದ್ದು, ಮೊಮ್ಮಗನನ್ನು ಹಿಡಿದು ಮಾಜಿ ಸಂಸದೆ ಸುಮಲತಾ ಭಾವುಕಾಗಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಕೂಡಾ ರೆಬಲ್ ಸ್ಟಾರ್ ಅಂಬರೀಶ್ ಹುಟ್ಟಿಬಂದರೆಂದು ಖುಷಿ ವ್ಯಕ್ತಪಡಿಸುತ್ತಿದ್ದಾರೆ.