ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆದೇಶ ಕಾಯ್ದಿರಿಸಿತ್ತು. ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.