ಬೆಂಗಳೂರು : ಸಚಿವ ಸ್ಥಾನಕ್ಕೆ ನೀಡಿದ್ದ ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರಗೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿನ್ನೆ ರಾತ್ರಿ 11:30 ಕ್ಕೆ ಬಿ.ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ನಾಗೇಂದ್ರ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ಪತ್ರವನ್ನು ನೀಡಿದ್ದು, ಅದನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ಸ್ವೀಕರಿಸಿದ್ದರು. ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿನ್ನೆ ರಾತ್ರಿ 11:30 ಕ್ಕೆ ಬಿ.ನಾಗೇಂದ್ರ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ