ಹುಬ್ಬಳ್ಳಿ: ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿಯಾಗಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಬಸ್ ಸಂಚರಿಸುತ್ತಿತ್ತು. ಚಾಲಕ ಬಸ್ ಚಾಲನೆ ಮಾಡುತ್ತಾ ರೀಲ್ಸ್ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಮುಂದಿದ್ದ ಎತ್ತಿನಬಂಡಿಯನ್ನು ಗಮನಿಸದೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಎರಪಡು ಎತ್ತುಗಳು ಮೃತಪಟ್ಟಿವೆ. ಘಟನೆಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ
ಗಾಯಗೊಂಡ ರೈತನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಚಾಲಕ ರಮೇಶ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.