ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯ ವರ್ತನೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಯುವತಿಯರ ಜತೆಗಿನ ರಾಸಲೀಲೆಯ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಸವದ್
ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ವಿಡಿಯೋಗಳು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ವೈರಲ್ ಆದ ವಿಡಿಯೋಗಳಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ನಾಯಕರ ಪುತ್ರಿಯರು ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.
ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಸವದ್ ಸ್ನೇಹಿತರೇ ಈ ವಿಡಿಯೋಗಳನ್ನು ವೈರಲ್ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇದರ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಯುವಕರ ಮೇಲೆ ಹಲ್ಲೆ ನಡೆದಿರುವ ವಿಡಿಯೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಹಲ್ಲೆಗಳು ಸವದ್ ಕಡೆಯವರಿಂದ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ, ಹಲ್ಲೆಗೆ ಒಳಗಾದ ಯುವಕರು ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
For More Updates Join our WhatsApp Group :




