ಬಳ್ಳಾರಿ: ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಯಮ ಮೀರಿ ನಟ ದರ್ಶನ್ ವಿಶೇಷ ಆತಿಥ್ಯ ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಂದು ಬುಧವಾರ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ.
ದರ್ಶನ್ ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ನಿನ್ನೆ ಕೋರ್ಟ್ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಅತ್ಯಂತ ಹಳೆಯ ಜೈಲುಗಳಲ್ಲಿ ಒಂದಾಗಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಇದೆ. ಹೀಗಾಗಿ ಮುಂದೆ ನ್ಯಾಯಾಲಯದ ವಿಚಾರಣೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಒಳಪಡಿಸಲಾಗುತ್ತದೆ.
ಇಂದು ಮಧ್ಯಾಹ್ನ 1 ಗಂಟೆಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ. ಕೋರ್ಟ್ ಎಲ್ಲಾ ಸದಸ್ಯರನ್ನೂ ಬೇರೆ ಬೇರೆ ಗ್ಯಾಂಗ್ ಗೆ ವರ್ಗಾಯಿಸಲು ಆದೇಶ ನೀಡಿದೆ. ದರ್ಶನ್ ಮಾತ್ರ ಬಳ್ಳಾರಿಗೆ ಶಿಫ್ಟ್ ಆಗಲಿದ್ದಾರೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಪವನ್, ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ, ಜಗದೀಶ್, ಲಕ್ಷ್ಮಣ್ ಶಿವಮೊಗ್ಗ ಜೈಲು, ಧನರಾಜ್ ಧಾರವಾಡ, ವಿನಯ್ ವಿಜಯಪುರ, ಪ್ರದೂಶ್ ಬೆಳಗಾವಿ, ನಾಗರಾಜ್ ಕಲಬುರಗಿ ಜೈಲಿಗೆ ವರ್ಗಾವಣೆಯಾಗಲಿದ್ದಾರೆ.
ಬಳ್ಳಾರಿ ಸೆಂಟ್ರಲ್ ಜೈಲಿ