ಚಂದನವನದ ನಟ ರಾಕ್ಷಸ, ಅಭಿಮಾನಿಗಳ ಪ್ರೀತಿಯ ಡಾಲಿ ಧನಂಜಯ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ವೈದ್ಯೆಯ ಜತೆ ಹಸೆಮಣೆ ಏರಲು ಸ್ಯಾಂಡಲ್ವುಡ್ ಸ್ಟಾರ್ ನಟ ಧನಂಜಯ್ ಫೋಟೋಶೂಟ್ ಕೂಡ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು, ಧನಂಜಯ್ ಅವರು ಮದುವೆಗೆ ರೆಡಿಯಾಗಿದ್ದಾರಂತೆ. ಮದುವೆ ಅಂದ ಮೇಲೆ ವಧು ಯಾರೆಂಬ ಪ್ರಶ್ನೆ ನಿಮ್ಮ ತಲೆಗೆ ಬಂದೇ ಬಂದಿರುತ್ತದೆ. ಡಾಲಿ ವರಿಸಲಿರುವ ವಧುವಿನ ಹೆಸರು ಧನ್ಯತಾ ಎಂದು ತಿಳಿದುಬಂದಿದೆ. ಇವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಚಿತ್ರದುರ್ಗ ಮೂಲದವರು
ಕೆಲವು ವರ್ಷಗಳಿಂದ ದನಂಜಯ ಹಾಗೂ ಡಾ. ಧನ್ಯತಾ ಸ್ನೇಹಿತರಾಗಿದ್ದರು. ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಮದುವೆ ಮೂಲಕ ಜೀವನದಲ್ಲಿ ಒಟ್ಟಿಗೆ ಹೆಜ್ಜೆ ಹಾಕಲು ನಿರ್ಧರಿಸಿದ್ದಾರೆ. ಇಬ್ಬರ ಪ್ರೀತಿಯನ್ನು ಎರಡೂ ಕುಟುಂಬಗಳು ಒಪ್ಪಿಕೊಂಡಿವೆ ಎಂದು ಹೇಳಲಾಗಿದೆ
ಮುಂದಿನ ವರ್ಷ ಅಂದರೆ, 2025ರ ಫೆಬ್ರವರಿ ತಿಂಗಳಲ್ಲಿ ಮದುವೆ ಆಗಲು ಡಾಲಿ ಧನಂಜಯ್ ಅವರು ಗೈನಕಾಲಜಿಸ್ಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಂದಹಾಗೆ ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ ಮತ್ತು ಓದಿದ್ದು ಮೈಸೂರಿನಲ್ಲಿ. ಅರಸಿಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ ಸದ್ಯ ಧನಂಜಯ್ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ ಧನಂಜಯ, ಧನ್ಯತಾ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಇಬ್ಬರ ಮುದ್ದಾದ ವಿಡಿಯೋಗೆ ಅಭಿಮಾನಿಗಳಿಂದ ಪ್ರೀತಿಯ ಶುಭಾಶಯ ಹರಿದುಬರುತ್ತಿದೆ.
ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗೌಂಡ್ನಲ್ಲಿ ಡಾಲಿ ಮತ್ತು ಧನ್ಯತಾ ಮದುವ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ.
ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಆದೆ ಗೌಂಡ್ ನಲ್ಲಿ ಅರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲ್ಲಿ ಸವೆಸ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ದಿರುವ ನಿರ್ಧಾರ ಮಾಡಿದ್ದಾರೆ. ಸದ್ಯ ಗುಡ್ ನ್ಯೂಸ್ ನೀಡಿರುವ ಧನಂಜಯ ಅವರಿಗೆ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ