War 2 ಚಿತ್ರದ ಶೂಟಿಂಗ್ ವೇಳೆ ನಟ ಜ್ಯೂನಿಯರ್ NTRಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಜೂನಿಯರ್ ಎನ್ಟಿಆರ್ ಮತ್ತು ಹೃತಿಕ್ ರೋಷನ್ ಸೀಕ್ವೆಲ್ ವಾರ್ 2 ನಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಈ ಮಧ್ಯೆ ಜ್ಯೂನಿಯರ್ ಎನ್ಟಿಆರ್ ಅವರು ಸೆಟ್ ನಲ್ಲಿ ಗಾಯಗೊಂಡಿದ್ದು, ಅವರಿಗೆ ಎರಡು ತಿಂಗಳ ಬೆಡ್ ರೆಸ್ಟ್ ಗೆ ಸೂಚಿಸಲಾಗಿದೆ ಎಂಬ ವರದಿ ಬಂದಿದೆ. ಈ ಹಿನ್ನೆಲೆ ಜ್ಯೂನಿಯರ್ ಎನ್ಟಿಆರ್ ಭಾಗದ ಚಿತ್ರೀಕರಣ ಸದ್ಯಕ್ಕೆ ಮಾಡುವುದಿಲ್ಲ.
ಜೂನಿಯರ್ ಎನ್ಟಿಆರ್ ಅವರು ಆಕ್ಷನ್ ದೃಶ್ಯಕ್ಕಾಗಿ ತಯಾರಿ ನಡೆಸುತ್ತಿದ್ದಾಗ ಅವರ ಕೈಗಳಿಗೆ ಗಾಯವಾಗಿದೆ .
ಹೀಗಾಗಿ ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ವರದಿಗಳ ಪ್ರಕಾರ, ಶೂಟಿಂಗ್ ನ್ನು ಅಕ್ಟೋಬರ್ ಗೆ ಮುಂದೂಡಲಾಗಿದೆ. ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ.