ಬಂಧನದ ಭೀತಿಯಲ್ಲಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ

ಬೆಂಗಳೂರು: ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡನ್ನು ಅನಧಿಕೃತವಾಗಿ ಬಳಸಿ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ರಕ್ಷಿತ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ.

ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ಪರಮವಾ ಸ್ಟೂಡಿಯೋಸ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

Leave a Reply

Your email address will not be published. Required fields are marked *