ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯಾ ಬ್ಲಾಕ್ ಒಕ್ಕೂಟದ ಸಂಸದರು ಇಂದು ಮಂಗಳವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿ ಈ ಬಗ್ಗೆ ಜಂಟಿ ಸಂಸದೀಯ ತನಿಖೆಗೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.
ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.