ಶಿಕ್ಷಕರ ಮೇಲೆ ಹೆಚ್ಚುವರಿ ಹೊಣೆ.. Census ಕಾರ್ಯಕ್ಕೆ ಆಯ್ಕೆ.

ಶಿಕ್ಷಕರ ಮೇಲೆ ಹೆಚ್ಚುವರಿ ಹೊಣೆ.. ಜನಗಣತಿ ಕಾರ್ಯಕ್ಕೆ ಆಯ್ಕೆ.

ಪಾಠ, ಪರೀಕ್ಷಾ ಮೌಲ್ಯಮಾಪನ, ಬಿಸಿಯೂಟ ಜವಾಬ್ದಾರಿ ನಡುವೆಯೇ ಶಿಕ್ಷಕರಿಗೆ ಜನಗಣತಿ ಕರ್ತವ್ಯ

ಬೆಂಗಳೂರು: ಜಾತಿ ಗಣತಿ, ಪಾಠ, ಬಿಸಿಯೂಟ ಹೀಗೆ ನಾನಾ ಜವಾಬ್ದಾರಿಗಳು ಮತ್ತು ಹೊಣೆ ನಿಭಾಯಿಸಿ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರನ್ನು ಏಪ್ರಿಲ್ 16ರಿಂದ ಜನಗಣತಿ ಕಾರ್ಯಕ್ಕೂ ರಾಜ್ಯದಲ್ಲಿ ನಿಯೋಜನೆ ಮಾಡಲಾಗ್ತಿದೆ. ರಾಜ್ಯದಲ್ಲಿ 2027ರ ಜನಗಣತಿ ಕಾರ್ಯಕ್ಕಾಗಿ ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿದ್ದು, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಏಪ್ರಿಲ್ 1ರಿಂದ ಸ್ವಯಂ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಏಪ್ರಿಲ್ 15ರವರೆಗೆ ಮುಂದುವರಿಯಲಿದೆ.

ಈ ನಡುವೆ 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಆರೋಗ್ಯ ಸಮಸ್ಯೆಗಳು ಮತ್ತು ಹೆಚ್ಚುತ್ತಿರುವ ತಾಪಮಾನವನ್ನು ಗಮನಿಸಿ ವಿಶೇಷ ತಿದ್ದುಪಡಿ ಪ್ರಕ್ರಿಯೆಯಿಂದ ವಿನಾಯಿತಿ ನೀಡುವಂತೆ ರಾಜಸ್ವ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಗಲಿ ತಿಳಿಸಿದ್ದಾರೆ. ಆದರೆ ನಮ್ಮ ಮನವಿಯನ್ನು ತಿರಸ್ಕರಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರಿಗೂ ಜನಗಣತಿ ಕೆಲಸದಿಂದ ವಿನಾಯಿತಿ ನೀಡುವಂತೆ ಕೇಳಿದ್ದೇದ್ದರೂ ಅದನ್ನೂ ಒಪ್ಪಿಲ್ಲ ಎಂದು ಅವರು ಹೇಳಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ಮೇಲೆ ಹೆಚ್ಚುವರಿ ಭಾರ ಬೀಳುತ್ತಿರುವುದು ನಮಗೆ ತಿಳಿದಿದೆ. ಆದರೆ ಜನಗಣತಿಯಂತಹ ಮಹತ್ವದ ಡೇಟಾ ಸಂಗ್ರಹಣಾ ಕಾರ್ಯಗಳನ್ನು ಹೊರಗುತ್ತಿಗೆಗೆ ನೀಡಲು ಸಾಧ್ಯವಿಲ್ಲ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *