ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅರೆಸ್ಟ್ ಆಗಿರುವ ಬೆನ್ನಲ್ಲೇ ಮತ್ತೊಬ್ಬ ನಟನಿಗೆ ಢವ ಢವ ಶುರುವಾಗಿದೆ ಎನ್ನಲಾಗಿದೆ. ಶನಿವಾರ ಮಧ್ಯಾಹ್ನದಿಂದ ದರ್ಶನ್ ಅಂಡ್ ಟೀಂ ವಿನಯ್ ಒಡೆತನದ ಸ್ಟೋನಿಬ್ರೂಕ್ ನಲ್ಲಿ ಪಾರ್ಟಿ ಮಾಡುತ್ತಿದ್ದರು.
ಈ ವೇಳೆ ದರ್ಶನ್ ಜೊತೆ ಪಾರ್ಟಿಯಲ್ಲೇ ಸ್ಟಾರ್ ನಟ ಇದ್ದರು ಎನ್ನಲಾಗಿದೆ.
ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಅಂತಾ ದರ್ಶನ್ ಅವರು ಪಾರ್ಟಿಯಿಂದ ಎದ್ದು ಹೊರಟಿದ್ದರು ಎನ್ನಲಾಗಿದೆ. ಇದೀಗ ದರ್ಶನ್ ಬಂಧನದಿಂದ ಸ್ಟಾರ್ ನಟನ ಎದೆಯಲ್ಲಿ ಢವ ಢವ ಶುರುವಾಗಿದೆ ಎನ್ನುವ ಮಾತು ಕೇಳಿ ಬಂದಿದೆ.
ಯಾವುದೇ ಕ್ಷಣದಲ್ಲಾದ್ರು ಕಾಮಾಕ್ಷಿಪಾಳ್ಯ ಪೊಲೀಸರು ಸಂಪರ್ಕಿಸಬಹುದು ಅನ್ನೊ ಭಯದಲ್ಲಿದ್ದಾರಂತೆ ಆ ನಟ. ಇದೀಗ ಆ ನಟನಿಗೆ ಪೊಲೀಸರು ನೋಟಿಸ್ ಕೊಡುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.
ನಟ ದರ್ಶನ್
ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದ್ರು ಚರ್ಚೆಯಾಗಿತ್ತಾ ಎಂದು ಮಾಹಿತಿ ಪಡೆಯುವ ಸಾಧ್ಯತೆಯಲ್ಲಿದೆ. ನೋಟಿಸ್ ಕೊಟ್ಟು ಕರೆಸಬೇಕಾ ಬೇಡ್ವಾ ಅಂತಾ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಪೊಲೀಸರು ಸಲಹೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಜೂನ್ 8 ರ ಸಂಜೆ ದರ್ಶನ್ ಗ್ಯಾಂಗ್ನಿಂದ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಭೀಕರವಾಗಿ ಹತ್ಯೆಯಾಗಿದ್ದ. ಜೂನ್8 ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಕರೆತಂದಿದ್ದರು. ಜೂನ್ 8 ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ಸ್ವಿಚ್ ಆಫ್ ಆಗಿದ್ದ ರೇಣುಕಾಸ್ವಾಮಿ ಮೊಬೈಲ್, ಮಧ್ಯಾಹ್ನದ ವೇಳೆ ಆರ್ ಆರ್ ನಗರದಲ್ಲಿ ಸ್ವಿಚ್ ಆನ್ ಆಗಿತ್ತು. ಜೂನ್ 8 ರ ಸಂಜೆ ವೇಳೆ ಆರ್ ಆರ್ ನಗರದ ಪಟ್ಟಣಗೆರೆಯಲ್ಲಿ ಮತ್ತೆ ಸ್ವಿಚ್ ಆಫ್ ಆಗಿತ್ತು.
ರೇಣುಕಾಸ್ವಾಮಿ-ದರ್ಶನ್
ಅದೇ ದಿನ ತಡರಾತ್ರಿ ಸುಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಮುಂಭಾಗದ ರಾಜ ಕಾಲುವೆಯಲ್ಲಿ ರೇಣುಕಾಸ್ವಾಮಿ ಮೃತದೇಹವನ್ನು ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಬಿಸಾಡಿದ್ದರು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಮತ್ತು ರಾಘವೇಂದ್ರ ಶರಣಾಗಿದ್ದರು. ಆದರೆ ಪೊಲೀಸ್ ವಿಚಾರಣೆ ವೇಳೆ ರೇಣುಕಾಸ್ವಾಮಿ ಮೊಬೈಲ್ ಅನ್ನು ಸುಮ್ಮನಹಳ್ಳಿ ರಾಜ ಕಾಲುವೆಗೆ ಬಿಸಾಡಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಕಳೆದ ಹತ್ತು ದಿನಗಳಿಂದ ಹುಡುಕಾಡಿದ್ರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ.
ರೇಣುಕಾಸ್ವಾಮಿ ಮೊಬೈಲ್ನಲ್ಲೇ ಕ್ಷಮಾಪಣಾ ವಿಡಿಯೋ?
ಈ ಪ್ರಕರಣದಲ್ಲಿ ರೇಣುಕಾಸ್ವಾಮಿ ಮೊಬೈಲ್ನಲ್ಲಿ ಪ್ರಮುಖ ಸಾಕ್ಷ್ಯಗಳಿದ್ದು, ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಮೊಬೈಲ್ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದ ಆರೋಪವಿದ್ದು, ಆರ್ ಆರ್ ನಗರ, ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.
ಕೊಲೆ ಕೇಸ್ನಲ್ಲಿ ಭಾಗಿಯಾದವರ ಸಂಖ್ಯೆ 19ಕ್ಕೆ ಏರಿಕೆ
ಸದ್ಯ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಅಚ್ಚರಿಯ ಸಂಗತಿ ಎಂದರೆ ಕೊಲೆ ಪ್ರಕರಣದಲ್ಲಿ ಭಾಗಿಯಾದ 19 ಮಂದಿಯ ಪೈಕಿ 7 ಮಂದಿಗೆ ದರ್ಶನ್ ನೇರ ಪರಿಚಯವೇ ಇಲ್ಲ ಎಂದು ತಿಳಿದು ಬಂದಿದೆ. ಸಈ ಕೃತ್ಯದಲ್ಲಿ ಭಾಗಿಯಾದವರು ದರ್ಶನ್ ಅಭಿಮಾನಿಗಳಾಗಿದ್ದು, ಹಲವರು ದರ್ಶನ್ನನ್ನು ಭೇಟಿಯಾಗಿದ್ದೇ ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆದ ನಂತರ. ದರ್ಶನ್ಗಾಗಿ ಕೃತ್ಯ ಎಸಗಿದವರಲ್ಲಿ ಕೆಲವರು ದರ್ಶನ್ನನ್ನು ಪೊಲೀಸ್ ಸ್ಟೇಷನ್ನಲ್ಲಿಯೇ ಮುಖಾಮುಖಿ ನೋಡಿದ್ದಾರೆ.