ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿತು. ಘಟನೆ ನಡೆದಾಗ ಬಸ್ ಖಾಲಿ ಇತ್ತು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ವಿಮಾನ ನಿಲ್ದಾಣದಲ್ಲಿ ಎಲ್ಲಾ ಕಾರ್ಯಾಚರಣೆಗಳು ಸಾಮಾನ್ಯವಾಗಿದ್ದವು.
ಇಂದು ಮುಂಜಾನೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಗನ್ನವರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಕಸ್ಟಮ್ಸ್ ಅಧಿಕಾರಿಗಳ ಕೊಠಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.ಬೆಂಕಿಯ ಅವಘಡದಲ್ಲಿ ಸಾಫ್ಟ್ವೇರ್ ಉಪಕರಣಗಳು, ವಲಸೆ ಕೊಠಡಿಯಲ್ಲಿ ಸ್ಪ್ಲಿಟ್ ಏರ್ ಕಂಡಿಷನರ್ ಮತ್ತು ಕಸ್ಟಮ್ಸ್ ಅಧಿಕಾರಿಗಳಿಗೆ ಸೇರಿದ ಲಗೇಜ್ ಬ್ಯಾಗ್ಗಳು ಬೆಂಕಿಗಾಹುತಿಯಾಗಿದೆ.
For More Updates Join our WhatsApp Group :




