ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ.?

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ.?

ವಾಯುಮಾಲಿನ್ಯದಿಂದ ಸುರಕ್ಷಿತವಾಗಿರಲು ಏನು ಮಾಡಬೇಕು?

ಬೆಂಗಳೂರು: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ  ಮಧ್ಯಮ ಮಟ್ಟದಲ್ಲಿದ್ದು, ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಣ್ಣು ಕೆರಕು, ಉಸಿರಾಟದ ತೊಂದರೆ ಮತ್ತು ಅಲರ್ಜಿಗಳು ಕಾಣಿಸಿಕೊಳ್ಳಬಹುದು.

ಸುರಕ್ಷತಾ ಕ್ರಮಗಳನ್ನು ಅನುಸರಿಸಿ

ಈ ಪರಿಸ್ಥಿತಿಯಲ್ಲಿ ಸುರಕ್ಷತೆ ಅತ್ಯಂತ ಮುಖ್ಯ. ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಉತ್ತಮ. ಸಾಧ್ಯವಾದರೆ ಬೆಳಿಗ್ಗೆ ಅಥವಾ ಸಂಜೆ ಪೀಕ್ ಟ್ರಾಫಿಕ್ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಮನೆಯೊಳಗೆ ಗಿಡಗಳನ್ನು ಬೆಳೆಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ಸ್ವಚ್ಛತೆ ಕಾಪಾಡುವುದು ಮಾಲಿನ್ಯದ ಪರಿಣಾಮವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.

ಕಲುಷಿತ ಗಾಳಿಗೆ ಕಾರಣವೇನು?

ಇಂದು ಬೆಂಗಳೂರಿನ AQI ಗುಣಮಟ್ಟ 172 ಇದ್ದು, PM2.5 85 ಮತ್ತು PM10 120 ಇದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 103 ಆಗಿದ್ದು, PM10 144ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –172
  • ಮಂಗಳೂರು-170
  • ಮೈಸೂರು – 156
  • ಬೆಳಗಾವಿ – 150
  • ಕಲಬುರ್ಗಿ – 112
  • ಶಿವಮೊಗ್ಗ – 189
  • ಬಳ್ಳಾರಿ – 209
  • ಹುಬ್ಬಳ್ಳಿ- 154
  • ಉಡುಪಿ –168
  • ವಿಜಯಪುರ –66

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *