ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಅಜಯ್ ರಾವ್ ಹಾಗೂ ಸ್ವಪ್ನ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014 ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.
ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟು ಬಹಿರಂಗವಾಗಬೇಕಿದೆ. ಅಜಯ್ ರಾವ್ ಹಾಗೂ ಸಪ್ನಾ ಅವರುಗಳು ಪ್ರೀತಿಸಿ ಮದುವೆ ಆಗಿದ್ದರು. ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಎದುರು ಸರಳವಾಗಿ ಈ ಜೋಡಿಯ ವಿವಾಹ ನಡೆದಿತ್ತು.
For More Updates Join our WhatsApp Group :



