ವಿಮಾನ ನಿಯಂತ್ರಣ ಕಳೆದುಕೊಂಡು ಬೆಂ* ಹೊತ್ತಿಕೊಂಡು ಪತನ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಹರಿದಾಡುತ್ತಿವೆ. ಬಾರಾಮತಿ ವಿಮಾನ ನಿಲ್ದಾಣದ ಸಮೀಪವಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ವಿಮಾನವು ರನ್ವೇ ಹತ್ತಿರ ಬರುತ್ತಿದ್ದಂತೆ ದಿಢೀರ್ ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಳ್ಳುವುದನ್ನಿ ನೋಡಬಹುದು. ವಿಮಾನವು ಎರಡನೇ ಬಾರಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಿಸಿಟಿವಿ ದೃಶ್ಯದಲ್ಲಿ ವಿಮಾನವು ನಿಯಂತ್ರಣ ಕಳೆದುಕೊಂಡು ವೇಗವಾಗಿ ಭೂಮಿಗೆ ಅಪ್ಪಳಿಸುವುದು ಮತ್ತು ನಂತರದ ಕ್ಷಣದಲ್ಲೇ ಭಾರಿ ಸ್ಫೋಟದೊಂದಿಗೆ ದಟ್ಟವಾದ ಹೊಗೆ ಏರುವುದು ದಾಖಲಾಗಿದೆ. ಈ ಸಿಸಿಟಿವಿ ದೃಶ್ಯಾವಳಿಗಳನ್ನು ಈಗ ಡಿಜಿಸಿಎ ಮತ್ತು ತನಿಖಾ ಸಂಸ್ಥೆಗಳು ವಿಮಾನ ಪತನದ ನಿಖರ ಕಾರಣವನ್ನು ಪತ್ತೆಹಚ್ಚಲು ಬಳಸಿಕೊಳ್ಳುತ್ತಿವೆ.
For More Updates Join our WhatsApp Group :




