ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಪದ್ಮ ಭೂಷಣ ಪ್ರಶಸ್ತಿ ಪಡೆದ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಅವರು ಚಿತ್ರರಂಗದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಬೇರೆ ಯಾವುದಾದರೂ ಸಂದರ್ಭದಲ್ಲಿ ನಾನು ಫಿಲ್ಮ್ ಚೇಂಬರ್ಗೆ ಬರುತ್ತೇನೆ. ಇವರ ಮೇಲೆಲ್ಲ ನನಗೆ ಕೋಪ ಇದೆ. ಇರಲಿ, ಈಗ ನಾನು ಅದರ ಬಗ್ಗೆ ಮಾತಾಡೋಕೆ ಹೋಗಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿದರು.
For More Updates Join our WhatsApp Group :



