ಗ್ರಾಮ ಸ್ವಾವಲಂಬನೆಗೆ ಸೋಲಾರ್ ಮೈಕ್ರೋ ಗ್ರಿಡ್ ಯೋಜನೆ, ಗ್ರಾಮೀಣ ಅಭಿವೃದ್ಧಿಗೆ ಹಲವು ಹೊಸ ಕಾರ್ಯಕ್ರಮಗಳು.
ಬೆಂಗಳೂರು: ಮನ್‌ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದಿನ ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳ ಸ್ವಾವಲಂಬನೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸ್ಥಾಪಿಸುವ ಅನಂತ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಕೇಂದ್ರ ಸರ್ಕಾರದ ನರೇಗಾ ಯೋಜನೆಯ ಬದಲಾವಣೆಯ ಕುರಿತು ರಾಜ್ಯ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬದಲಾವಣೆಯು ಯೋಜನೆಯ ಮೂಲ ಉದ್ದೇಶ ಮತ್ತು ಗ್ರಾಮ ಸ್ವರಾಜ್ ಪರಿಕಲ್ಪನೆಗೆ ವಿರುದ್ಧವಾಗಿದೆ ಎಂದು ವಾದಿಸಿದೆ. ರಾಜ್ಯದ ರೈತ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಜಲಜೀವನ್ ಮಿಷನ್ ಅನುಷ್ಠಾನ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿಗಾಗಿ ಕಲ್ಯಾಣ ಪಥ ಯೋಜನೆಯಡಿ 1,000 ಕೋಟಿ ರೂ.ಗಳ ಅನುದಾನ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಒತ್ತು ನೀಡಲಾಗಿದೆ.
For More Updates Join our WhatsApp Group :




