ಹಾವೇರಿ: ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್ಡಿಎ ರಾಜು ಸುವ್ರೆ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ. ‘ಕೆಲ ಮಾಹಿತಿಗಳು ಬಂದಿದ್ದವು.
ಅವುಗಳ ಪರಿಶೀಲನೆ ನಡೆಸಿದಾಗ ದಾಖಲೆಗಳು ಲಭ್ಯವಾಗಿದ್ದವು. ಅದನ್ನು ಆಧರಿಸಿ ರಾಜು ಸುವ್ರೆ ಮನೆ ಮೇಲೆ ದಾಳಿ ಮಾಡಲಾಗಿದೆ. ತಪಾಸಣೆ ನಡೆಯುತ್ತಿದ್ದು, ದಾಳಿ ಮುಗಿದ ನಂತರ ಮತ್ತಷ್ಟು ಮಾಹಿತಿ ನೀಡಲಾಗುವುದು’ ಎಂದು ಪೊಲೀಸರು ಹೇಳಿದರು.