ಅಂಬೇಡ್ಕರ್ ಜಯಂತಿ: ವಿಧಾನಸೌಧದಲ್ಲಿ ಭವ್ಯ ಆಚರಣೆ.!

ಅಂಬೇಡ್ಕರ್ ಜಯಂತಿ: ವಿಧಾನಸೌಧದಲ್ಲಿ ಭವ್ಯ ಆಚರಣೆ.

ಸಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ  ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ : ‌ಸಿದ್ದರಾಮಯ್ಯ.

ಬೆಂಗಳೂರು : ಸಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ  ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ  ಮಾತನಾಡುತ್ತಾ, ಅಂಬೇಡ್ಕರ್ ಅವರು ಹೇಳಿರುವಂತೆ *ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ* ಎಂದು ತಿಳಿಸಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ, ಕೆ. ಹೆಚ್.ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯರಾದ  ಭೋಜೇಗೌಡ, ಗೋವಿಂದರಾಜು, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *