ಅಂಕೋಲದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ.
ಕಾರವಾರ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುರ್ಚಿ ಕಾಳಗದ ನಡುವೆ ಅವರು ಶಕ್ತಿ ದೇವತೆ ಮೊರೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆಂಡ್ಲೇ ದೇವಸ್ಥಾನದ ಗರ್ಭಗುಡಿ ಬಾಗಿಲು ಹಾಕಿ ಡಿಕೆಶಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ನಂತರ, ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಮಹಾಗಣಪತಿ ಮತ್ತು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಕುರ್ಚಿ ಕದನ ತೀವ್ರಗೊಂಡಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹಾಸನದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಯನ್ನು ಮನೆಗೆ ಕರೆಸಿಕೊಂಡು ಪೂಜೆ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
For More Updates Join our WhatsApp Group :



