ಆಂಧ್ರಪ್ರದೇಶ || ನಿರ್ಮಾಣ ಹಂತದ ವೈಎಸ್‌ಆರ್‌ಸಿಪಿ ಕೇಂದ್ರ ಕಚೇರಿ ಧ್ವಂಸ : ಜಗನ್ ಕಿಡಿ

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ NDA ರಾಜ್ಯ ಸರ್ಕಾರ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿರೋಧ ಪಕ್ಷದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಶನಿವಾರ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನೆಲಸಮಗೊಳಿಸಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿದ್ದು, ಚಂದ್ರಬಾಬು ನಾಯ್ಡು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಬಹುತೇಕ ಪೂರ್ಣಗೊಂಡಿದ್ದ ವೈಎಸ್ ಆರ್ ಸಿಪಿ ಕೇಂದ್ರ ಕಚೇರಿಯನ್ನು ಸರ್ವಾಧಿಕಾರಿಯಂತೆ ಯಂತ್ರಗಳು ಮತ್ತು ಬುಲ್ಡೋಜರ್‌ಗಳಿಂದ ವೈಎಸ್‌ಆರ್‌ಸಿಪಿಯ ಕೇಂದ್ರ ಕಚೇರಿಯನ್ನು ಕೆಡವಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶನಿವಾರ ಮುಂಜಾನೆ 5.30ರ ಸುಮಾರಿಗೆ ಧ್ವಂಸ ಕಾರ್ಯಾಚರಣೆ ಪ್ರಾರಂಭವಾಗಿದೆ. “ಸಿಆರ್‌ಡಿಎ (ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ) ದ ಕ್ರಮಗಳನ್ನು ಪ್ರಶ್ನಿಸಿ ವೈಎಸ್‌ಆರ್‌ಸಿಪಿ ಶುಕ್ರವಾರ ಹೈಕೋರ್ಟ್‌ಗೆ ಮೊರೆ ಹೋಗಿ್ತು. ಯಾವುದೇ ಧ್ವಂಸ ಕಾರ್ಯಾಚರಣೆ ನಡೆಯದಂತೆ ಕೋರ್ಟ್ ಆದೇಶ ನೀಡಿತ್ತು.ಆದರೆ, ಪ್ರಾಧಿಕಾರ ಹಿಂದೆ ಸರಿದಿದ್ದು, ಕಟ್ಟಡವನ್ನು ಧ್ವಂಸಗೊಳಿಸಿದೆ ಎಂದು ವೈಎಸ್ ಆರ್ ಸಿಪಿ ಹೇಳಿದೆ.

Leave a Reply

Your email address will not be published. Required fields are marked *