ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ.

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ.

ದೇಗುಲದ ಆವರಣದಲ್ಲಿ ಡಿಸಿ, ಎಸ್ಪಿ ಕಾದು ಕುಳಿತ ಶಕ್ತಿಶಾಲಿ ನಿಗಾ.

ದಾವಣಗೆರೆ : ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾತ್ರೆಯ ಸುಗಮ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತಿದೆ.

ಪ್ರಾಣಿಬಲಿ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಪೊಲೀಸ್ ಅಧೀಕ್ಷಕರು (ಎಸ್ಪಿ) ರಾತ್ರಿಯಿಡೀ ಜಾತ್ರಾ ಆವರಣದಲ್ಲಿ ಹಾಜರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಪ್ರಾಣಿ ಬಲಿಯಂಥ ಕೃತ್ಯಗಳು ನಡೆದಿಲ್ಲ. ಭಕ್ತರು ಅತ್ಯಂತ ಭಕ್ತಿಪರವಶರಾಗಿ, ಮೂಢನಂಬಿಕೆಗಳಿಂದ ದೂರವಾಗಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಡಿಸಿ ಹಾಗೂ ಎಸ್​​ಪಿ ತಿಳಿಸಿದ್ದಾರೆ..

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *