ಅಂಕಲಗಿ ಪಟ್ಟಣ ಸಂಪೂರ್ಣ ಬಂದ್, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.

ಅಂಕಲಗಿ ಪಟ್ಟಣ ಸಂಪೂರ್ಣ ಬಂದ್, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.

ಬೆಳಗಾವಿ: ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಪಟ್ಟಣ ಸಂಪೂರ್ಣ ಬಂದ್​ ಆಗಿದ್ದು, ಅಂಗಡಿ ಮುಂಗಟ್ಟುಗಳನ್ನ ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ವರ್ತಕರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ಅಂಕಲಗಿ ಪಟ್ಟಣದ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ ಜನ ಸಂಚಾರವಿಲ್ಲದೆ ಪಟ್ಟಣದ ರಸ್ತೆಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡುಬಂದಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *