ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ
ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನಾಚರಣೆಯನ್ನು ಶುಕ್ರವಾರ ರಾಜ್ಯಾದ್ಯಂತ ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಗುತ್ತಿದೆ.
ಈ ವಿಶೇಷ ದಿನದಂದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಅಣ್ಣಾವ್ರ ಪುಣ್ಯಭೂಮಿಗೆ ದೊಡ್ಮನೆ ಕುಟುಂಬದವರು ಹಾಗೂ ಸಾವಿರಾರು ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಮಾಧಿ ಸ್ಥಳದಲ್ಲಿ ದೊಡ್ಮನೆ ಕುಟುಂಬದ ಪೂಜೆ:
ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಪತ್ನಿ ಮಂಗಳಾ ಅವರೊಂದಿಗೆ ಸಮಾಧಿ ಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಪ್ಪಾಜಿ ನಮ್ಮನ್ನು ಅಗಲಿ 20 ವರ್ಷಗಳಾದರೂ ಅಭಿಮಾನಿಗಳು ತೋರುತ್ತಿರುವ ಪ್ರೀತಿ ಅಚಲವಾಗಿದೆ. ಇನ್ನು ಮೂರು ವರ್ಷಗಳಲ್ಲಿ ಅಪ್ಪಾಜಿಗೆ 100 ವರ್ಷ ತುಂಬಲಿದೆ. ಆ ಹೊತ್ತಿಗೆ ಈ ಪುಣ್ಯಭೂಮಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ” ಎಂದು ತಿಳಿಸಿದರು. ಇಂದಿನ ದಿನವಿಡೀ ಶಿವಣ್ಣ, ಪೂರ್ಣಿಮಾ ಮತ್ತು ಕುಟುಂಬದ ಉಳಿದ ಸದಸ್ಯರು ಭೇಟಿ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 53ನೇ ಹುಟ್ಟುಹಬ್ಬವೂ ಇಂದೇ ಆಗಿರುವುದು ವಿಶೇಷವಾಗಿದೆ. ಹುಟ್ಟುಹಬ್ಬದ ಪ್ರಯುಕ್ತ ಮುಂಬೈನಲ್ಲಿ ಅಭಿಮಾನಿಗಳು ಕ್ರಿಕೆಟ್ ದಂತಕಥೆ ಸಚಿನ್ ಪೋಸ್ಟರ್ ಹಿಡಿದು ಮೆರವಣಿಗೆ, ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.
For More Updates Join our WhatsApp Group :




